Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಇಸ್ಲಾಮಿಕ್ ಮೂಲಭೂತವಾದಿಗಳನ್ನು ಅಮೆರಿಕಾದಿಂದ ಹೊರಹಾಕಲು ಟ್ರಂಪ್ ಆದೇಶ

ವಾಷಿಂಗ್ ಟನ್: ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಚುನಾವಣೆಯ ಭರವಸೆಗಳ ಪೈಕಿ, ಇಸ್ಲಾಮಿಕ್ ರಾಷ್ಟ್ರಗಳಿಂದ ಬರುವ ನಿರಾಶ್ರಿತರು ಹಾಗೂ ಜನರು ಅಮೆರಿಕ ಪ್ರವೇಶಿಸದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಪ್ರಮುಖವಾಗಿತ್ತು. ಈಗ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಡೊನಾಲ್ಡ್ ಟ್ರಂಪ್ ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ಬರುವ ಜನರನ್ನು ನಿಯಂತ್ರಿಸುವುದಕ್ಕೆ ಕಠಿಣ ನಿಯಮಗಳನ್ನು ವಿಧಿಸಿ ಜ.27 ರಂದು ಆದೇಶ ಹೊರಡಿಸಿದ್ದಾರೆ. 

ಅಮೆರಿಕಾವನ್ನು ಉಗ್ರತತ್ವದ ಇಸ್ಲಾಮಿಕ್ ಭಯೋತ್ಪಾದಕರಿಂದ ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ಆದೇಶ ಹೊರಡಿಸಿದ ನಂತರ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೊರಗಿನ ಶತ್ರುಗಳು ಒಳನುಗ್ಗುವುದನ್ನು ತಡೆಗಟ್ಟಿ ದೆಶವನ್ನು ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿರುವ ಡೊನಾಲ್ಡ್ ಟ್ರಂಪ್, ಉಗ್ರವಾದದ ಇಸ್ಲಾಮಿಕ್ ಭಯೋತ್ಪಾದಕರು ನಮ್ಮ ದೇಶದಲ್ಲಿರುವುದು ಬೇಡ, ದೇಶವನ್ನು ಬೆಂಬಲಿಸುವ, ದೇಶದ ಜನರನ್ನು ಪ್ರೀತಿಸುವವರಷ್ಟೇ ಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

No Comments

Leave A Comment