Log In
BREAKING NEWS >
ಕರಾವಳಿಯಲ್ಲಿ ಭಾರೀ ಮಳೆ-ಹಲವೆಡೆಯಲ್ಲಿ ನೆರೆ...ಜೂನ್ 22ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಅನುಗ್ರಹ ಲಕ್ಷ್ಮೀವೃತ ಕಾರ್ಯಕ್ರಮವು ಜರಗಲಿದೆ....

ಕಂಬಳ: ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಜನರಿಂದ ಬೃಹತ್‌ ಪ್ರತಿಭಟನೆ

ಬೆಂಗಳೂರು: ಕಂಬಳಕ್ಕಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ 150ಕ್ಕೂ ಹೆಚ್ಚು ಸಂಘಟನೆಗಳ ಸಾವಿರಾರು ಜನರು ಭಾನುವಾರ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಎಲ್ಲರೂ ಕಂಬಳದ ಪರ ನಿಂತು ಬೆಂಬಲ ನೀಡಬೇಕು ,ಅಧ್ಯಾದೇಶ ತಂದಾದರೂ ಕಂಬಳ ಉಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸಂಜೆ 4 ಗಂಟೆಯ ವರೆಗೆ ಪ್ರತಿಭಟನೆ ನಡೆಯಲಿದೆ.

ಎಲ್ಲಾ ಕನ್ನಡ ಒಕ್ಕೂಟಗಳು , ಕಂಬಳ ಪರ ಕರಾವಳಿಯ ಸಂಘಟನೆಗಳು ಮೈಸೂರು  ಬ್ಯಾಂಕ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈಗಾಗಲೇ ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳ ಹಾಗೂ ರಾಜ್ಯದ ಇತರೆಡೆ ಆಯೋಜಿಸುವ ಎತ್ತಿನ ಗಾಡಿ ಓಟವನ್ನು ಕಾನೂನು ಬದ್ಧಗೊಳಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ

No Comments

Leave A Comment