Log In
BREAKING NEWS >
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 3 ದಿನ ಶೋಕಾಚರಣೆ........20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಗೋ ಹಂತಕರಿಗೆ ಗರಿಷ್ಠ ಶಿಕ್ಷೆ ವಿಧಿಸಿ: ಸುಬ್ರಮಣಿಯನ್‌ ಸ್ವಾಮಿ

ಮಂಗಳೂರು: ಗೋಹತ್ಯೆ ಕಾಯ್ದೆಯನ್ನು ದೇಶದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗೋ ಹಂತಕರಿಗೆ ಗರಿಷ್ಠ ಶಿಕ್ಷೆ  ವಿಧಿಸುವ ನಿಟ್ಟಿನಲ್ಲಿ ಸಂವಿಧಾನದಲ್ಲೇ ಅವಕಾಶ ಕಲ್ಪಿಸಬೇಕು ಎಂದು ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್‌ ಸ್ವಾಮಿ ಒತ್ತಾಯಿಸಿದ್ದಾರೆ.

ಇಲ್ಲಿನ ಕೂಳೂರಿನಲ್ಲಿ ಭಾನುವಾರ ನಡೆದ ಮಂಗಲಗೋಯಾತ್ರೆಯ ಮಹಾಮಂಗಲದಲ್ಲಿ ಮಾತನಾಡಿದ ಅವರು, ಸಂವಿಧಾನದ 48ನೇ ಪರಿಚ್ಛೇದದಲ್ಲಿ ಈಗಾಗಲೇ ಗೋಹತ್ಯೆ ನಿಷೇಧದ ಪ್ರಸ್ತಾವ ಇದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಾರದೆ ಇರುವುದು ತಪ್ಪು ಎಂದರು.
ಗೋ ಮಾಂಸ ರಫ್ತನ್ನು ತಕ್ಷಣ ನಿಲ್ಲಿಸಬೇಕು ಎಂದ ಅವರು, ಗೋ ಹತ್ಯೆಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಾವು ಸಂಸತ್‌ನಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.

ಗೋಮಂಗಲಯಾತ್ರೆಯ ರೂವಾರಿಯಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ವೇದಿಕೆಯಲ್ಲಿ 1,300ಕ್ಕೂ ಅಧಿಕ ಸಂತರು ಜಮಾಯಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಗೋಪ್ರೇಮಿಗಳು ಇಲ್ಲಿಗೆ ಬಂದಿದ್ದರು.

No Comments

Leave A Comment