Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಜಾರ್ಖಾಂಡ್; ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಲತೆಹಾರ್: ಜಾರ್ಖಾಂಡ್ ಲತೆಹಾರ್ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಖಚಿತ ಮಾಹಿತಿ ಆಧಾರದ ಮೇಲೆ ಲತೇಹಾರ್ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದ್ದರು. ಈ ವೇಳೆ ನಕ್ಸಲರ ಅಡುತಾಣಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಮೂಲಗಳು ತಿಳಿಸಿವೆ.

ಎಸ್ಎಲ್ಆರ್, ಅಮೆರಿಕ ಮೂಲಕ ಸೆಮಿ-ಆಟೋಮೆಟಿಕ್ ರೈಫಲ್, 2 ದೇಸೀ ನಿರ್ಮಿಕ ರೈಫಲ್ ಗಳು, 81 ಸಜೀವ ಕಾರ್ಟ್ರಿಜ್ಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ವರೆಗೂ ಯಾರನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ತಿಳಿದುಬಂದಿದೆ.

No Comments

Leave A Comment