Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಪೋಲಿಯೊ ಲಸಿಕೆ ಹಾಕಿಸಿದ ಗಂಟೆಯೊಳಗೆ 5 ತಿಂಗಳ ಮಗು ಸಾವು

ವಿಝಿನಗರಮ್: ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿದ ಒಂದು ಗಂಟೆಯೊಳಗೆ 5 ತಿಂಗಳ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಪುಷ್ಪಾಪತಿಪಲೇಮ್ ನಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ಗೆಟ್ಟಯ್ಯ ಮತ್ತು ಸ್ವಾತಿ ದಂಪತಿಯ ಮಗು ಧರಣಿ ಮೃತ ಮಗು. ಬೆಳಗ್ಗೆ 10 ಗಂಟೆ ಸುಮಾರಿಗೆ ರೆಲ್ಲಿವಾಸ್ಲಾ ಬೂತ್ ನಲ್ಲಿ ಮಗುವಿಗೆ ಲಸಿಕೆ ಹಾಕಿಸಲಾಗಿದೆ. ಸ್ವಲ್ಪ ಸಮಯದ ನಂತರ ತಾಯಿ ಮಗುವಿಗೆ ಎದೆ ಹಾಲು ನೀಡಿದ್ದಾರೆ.

ಒಂದು ನಿಮಿಷದ ಬಳಿಕ ಮಗು ವಾಂತಿ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಕೂಡಲೇ ಮಗುವನ್ನು ಸ್ಥಳೀಯ ಪ್ರಾಥಮಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಕೂಡಲೇ ಪೋಷಕರು ಮಗುವನ್ನು ಬೋಗಪುರಂ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ.

ಪರೀಕ್ಷಿಸಿದ ವೈದ್ಯರು ಮಗು ಸತ್ತಿರುವ ವಿಷಯ ತಿಳಿಸಿದ್ದಾರೆ.ಉಸಿರಾಟದ ತೊಂದರೆಯಿಂದಾಗಿ ಮಗು ಸಾವನ್ನಪ್ಪಿರಬಹುದು ಎಂದು ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಪದ್ಮಜಾ ತಿಳಿಸಿದ್ದಾರೆ

No Comments

Leave A Comment