Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಹಾಸನ ತಲುಪಿದ ಹುತಾತ್ಮ ಯೋಧ ಸಂದೀಪ್ ಪಾರ್ಥೀವ ಶರೀರ: ಮಧ್ಯಾಹ್ನ ಅಂತ್ಯಕ್ರಿಯೆ

ಹಾಸನ: ಜಮ್ಮು ಮತ್ತು ಕಾಶ್ಮೀರದ ಹಿಮಕುಸಿತಕ್ಕೆ ಸಿಲುಕಿ ವೀರಮರಣವನ್ನಪ್ಪಿದ್ದ ಯೋಧ ಸಂದೀಪ್ ಕುಮಾರ್ ಶೆಟ್ಟಿ ಅವರ ಪಾರ್ಥೀರ ಶರೀರ ಮಂಗಳವಾರ ತಡರಾತ್ರಿ ತವರು ಜಿಲ್ಲೆ ಹಾಸನಕ್ಕೆ ತಲುಪಿದ್ದು, ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಡರಾತ್ರಿ 2.30ರ ಸುಮಾರಿಗೆ ವಿಶೇಷ ಆ್ಯಂಬುಲೆನ್ಸ್ ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ಸೇನೆಯ ಅಧಿಕಾರಿಗಳ ತಂಡ ಸಂದೀಪ್ ಅವರ ಪಾರ್ಥೀವ ಶರೀರದೊಂದಿಗೆ ಆಗಮಿಸಿದರು.ಜಿಲ್ಲಾಡಳಿತದ ಅಧಿಕಾರಿಗಳು ಸಂದೀಪ್ ಅವರ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು, ಈ ವೇಳೆ ಸಂದೀಪ್ ಅವರ ಪೋಷಕರು, ಶಾಸಕ. ಹೆಚ್.ಎಸ್. ಪ್ರಕಾಶ್, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಜರಿದ್ದರು.

ರಾತ್ರಿಯಿಡಿ ಸಂದೀಪ್ ಅವರ ಪಾರ್ಥೀವ ಶರೀರವನ್ನು ಹಾಸನದ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಇಡಲಾಗಿತ್ತು. ಜಲಿಲಾಧಿಕಾರಿಗಳ ಕಚೇರಿ ಬಳಿ ಇಂದು ಬೆಳಿಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 10 ಗಂಟೆ ಬಳಿಕ ಪಾರ್ಥೀವ ಶರೀರವನ್ನು ಸ್ವಗ್ರಾಮ ದೇವಿಹಳ್ಳಿಗೆ ಮೆರವಣಿಗೆ ಮುಖಾಂತರ ತೆಗೆದುಕೊಂಡು ಹೋಗಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆಯ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment