Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಸಂಸತ್ ನಲ್ಲಿ ಹೃದಯಾಘಾತಕ್ಕೊಳಗಾಗಿದ್ದ ಸಂಸದ ಇ ಅಹಮದ್ ನಿಧನ

ನವದೆಹಲಿ: ಸಂಸತ್ ನಲ್ಲಿ ಮಂಗಳವಾರ ಕುಸಿದು ಬಿದ್ದಿದ್ದ ಕೇರಳ ಸಂಸದ ಈ ಅಹಮದ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಬಜೆಟ್ ಅಧಿವೇಶನಕ್ಕೂ ಮುನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದ ಸಂದರ್ಭದಲ್ಲಿತೀವ್ರ ಹೃದಯಾಘಾತಕ್ಕೊಳಗಾಗಿ ಇ ಅಹಮದ್ ಅವರು ಸಂಸತ್ ಆವರಣದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇ ಅಹಮದ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ನಿನ್ನೆ ತಡರಾತ್ರಿ ಸುಮಾರು 2.15ರ ಸುಮಾರಿನಲ್ಲಿ ಇ ಅಹಮದ್ ಅವರು ಸಾವನ್ನಪ್ಪಿದ್ದಾರೆ ಎಂದು ಆರ್ ಎಂಎಲ್ ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಪಾರ್ಥೀವ ಶರೀರವನ್ನು ಇಂದು ದೆಹಲಿಯಲ್ಲಿ ದರ್ಶನಕ್ಕೆ ಇಟ್ಟು ಬಳಿಕ ಕೇರಳದ ಅವರ ಹುಟ್ಟೂರಿಗೆ ರವಾನಿಸಲಾಗುತ್ತದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅವಧಿಯಲ್ಲಿ ಇ ಅಹಮದ್ ಅವರು ವಿದೇಶಾಂಗ ಇಲಾಖೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

No Comments

Leave A Comment