Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಮಹಿಳೆಯರಿಗೆ ನೀಡಿದ್ದ ಮೀಸಲಾತಿಗೆ ವಿರೋಧ: ನಾಗಾಲ್ಯಾಂಡ್’ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಗುವಾಹಟಿ: ಸ್ಥಳೀಯ ಚುನಾವಣೆಯಲ್ಲಿ ಮಹಿಳೆಯರಿಗೆ ನೀಡಲಾಗಿದ್ದ ಶೇ.33 ರಷ್ಟು ಮೀಸಲಾತಿಗೆ ವಿರೋಧಿಸಿ ನಾಗಾಲ್ಯಾಂಡ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು, ಕೊಹಿಮಾದಲ್ಲಿದ್ದ ಹಲವು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪುರಸಭೆ ಸಂಸ್ಥೆಗಳಲ್ಲಿ  ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಿರುವುದಕ್ಕೆ ನಾಗಾ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಸಂಪ್ರದಾಯದಂತೆ ಚುನಾವಣೆಯನ್ನು ನಡೆಸುವಂತೆ ಆಗ್ರಹಿಸಿದ್ದವು. ಪ್ರತಿಭಟನೆ ಹತ್ತಿಕ್ಕುವ ಸಲುವಾಗಿ ಮಂಗಳವಾರ ಪೊಲೀಸರು ಗುಂಡು ಹಾರಿಸಿದ್ದರು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು. ಇದೇ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಕಾರಣವಾಯಿತು.

ನಾಗಾಲ್ಯಾಂಡ್ ರಾಜ್ಯದ ಚುನಾವಣಾ ಆಯೋಗ, ಜಿಲ್ಲಾಧಿಕಾರಿಗಳ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಅಬಕಾರಿ ಇಲಾಖೆ ಕಚೇರಿಗಳೆ ಬೆಂಕಿ ಹಚ್ಚಿರುವ ಪ್ರತಿಭಟನಾಕಾರರು ಅಲ್ಲಿನ ಮುಖ್ಯಮಂತ್ರಿ ಟಿ.ಆರ್. ಝೆಲಿಯಾಂಗ್ ಹಾಗೂ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಹಿಂಸಾಚಾರ ನಿಯಂತ್ರಿಸುವ ಸಲುವಾಗಿ ಸೇನೆಪಡೆಯನ್ನು ಬಳಸಿಕೊಳ್ಳಲಾಗುತ್ತಿದೆ. ಕೆಲವೆಡೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಹಿಂಸಾಚಾರ ಹಿನ್ನಲೆಯಲ್ಲಿ ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಲ್ಲಿನ ಸರ್ಕಾರ ಈಗಾಗಲೇ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಫೆ.1 ರಂದು ನಗರ ಸಂಸ್ಥೆ ಚುನಾವಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಹಿಂಸಾಚಾರ ಹಿಂಸಾಚಾರ ಹಿನ್ನಲೆಯಲ್ಲಿ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ.ಹಿಂಸಾಚಾರ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಹೇಳಿಕೆ ನೀಡಿದ್ದ ನಾಗಾಲ್ಯಾಂಡ್ ಮುಖ್ಯಮಂತ್ರಿ, ಪ್ರಜ್ಞಾಶೂನ್ಯ ವಿಧ್ವಂಸಕ ಕೃತ್ಯಗಳಲ್ಲಿ ಯಾರೂ ಭಾಗಿಯಾಗಬಾರದು. ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ದಾಳಿ ಮಾಡಿ, ನಾಶಪಡಿಸುವುದು ಸರಿಯಲ್ಲ. ಇಂತಹ ಕೃತ್ಯಗಳು ರಾಜ್ಯವನ್ನು ಪ್ರೀತಿಸುವ ಜನರ ಮೇಲೆ ಪರಿಣಾಮ ಬೀರಲಿದ್ದು, ಇದರಿಂದ ಭೀತಿಕರ ವಾತಾವರಣ ಉಂಟಾಗಲಿದೆ. ಪ್ರತಿಭಟನಾಕಾರರ ಆಗ್ರಹಗಳ ಬಗ್ಗೆ ಚಿಂತನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುವುದು ಸರಿಯಲ್ಲ ಎಂದು ಹೇಳಿದ್ದರು.

ನಾಗಾಲ್ಯಾಂಡ್ ಡಿಜಿಪಿ ಎಲ್ಎಲ್. ಡೌನ್ಜೆಲ್ ಅವರು ಮಾತನಾಡಿ, ಮುಖ್ಯಮಂತ್ರಿಗಳ ಫಾರ್ಮ್ ಹೌಸ್ ಗೂ ಬೆಂಕಿ ಹಚ್ಚಲಾಗಿದೆ. ಪ್ರಚಾರಕ್ಕೆ ಕೆಲವರು ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ನಾಗಾ ಪೀಪಲ್ಸ್ ಫಂಟ್ ನ್ನು ಅಧಿಕಾರಕ್ಕೆ ತರುವ ಸಲುವಾಗಿ ಸರ್ಕಾರಿ ಕಚೇರಿಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

No Comments

Leave A Comment