Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಗುಂಡಿನ ಕಾಳಗ: ಇಬ್ಬರು ಉಗ್ರರ ಹತ್ಯೆ-ಭದ್ರತಾ ಸಿಬ್ಬಂದಿ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರೆ ಬಳಿ ಅಮರ್‌ಗಢ ಪ್ರದೇಶದಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್‌ ಮುಜಾಹಿದ್ದಿನ್‌ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ವಾಹನವನ್ನು ನಿಲ್ಲಿಸುವಂತೆ ಸೂಚಿಸಿದ ಭದ್ರತಾ ಸಿಬ್ಬಂದಿ ಮೇಲೆ ವಾಹನದಲ್ಲಿದ್ದವರು ಗುಂಡು ಹಾರಿಸಿದರು. ಇದಕ್ಕೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ಒಳಗೊಂಡ ಜಂಟಿ ತಂಡ ಗುಂಡಿನಿಂದಲೇ ಪ್ರತ್ಯುತ್ತರ ನೀಡಿತು.

ಯೋಧ ನಾಪತ್ತೆ (ಕಥುವಾ ವರದಿ): ಇಲ್ಲಿನ ಪನ್ಸಾರ್ ಗಡಿಚೌಕಿಯಲ್ಲಿ ಸೇವೆ ಸಲ್ಲಿಸುವ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧ ಮಲ್ಸವ್‌ಕಿಮಾ ನಾಪತ್ತೆಯಾಗಿದ್ದಾರೆ. ಮಿಜೋರಾಂನ ನಿವಾಸದಿಂದ ಕರ್ತವ್ಯಕ್ಕೆ ಹಿಂತಿರುಗುತ್ತಿದ್ದ ವೇಳೆ ಜಲಂಧರ್‌ನಲ್ಲಿ ಫೆ. 1ರಂದು ಅವರು ನಾಪತ್ತೆಯಾಗಿರುವುದಾಗಿ ಬಿಎಸ್‌ಎಫ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

No Comments

Leave A Comment