Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಲಾಕಪ್‌ ಡೆತ್‌? ಯುವಕನ ಸಾವಿನ ಬಳಿಕ ಲಕ್ಷ್ಮೇಶ್ವರ ಉದ್ವಿಗ್ನ-10 ಬೈಕು ದಾಖಲೆಗಳು ಭಸ್ಮ-ಸೆಕ್ಷನ್ ಜಾರಿ

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್‌ ಠಾಣೆಯಲ್ಲಿ  ಲಾರಿ ಚಾಲಕನೊಬ್ಬನ ಲಾಕಪ್‌ ಡೆತ್‌ ಆಗಿರುವ ಆರೋಪ ಕೇಳಿ ಬಂದಿದೆ.

ಬೆಟೂರ ಗ್ರಾಮದ ಲಾರಿ ಚಾಲಕ ಶಿವಪ್ಪ ಗೂಳಿ(21) ಎಂಬ ಲಾರಿ ಚಾಲಕನನ್ನು ಅಕ್ರಮ ಮರಳು ಸಾಗಾಣಿಕೆ ಆರೋಪದಲ್ಲಿ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದು , ಆ ಬಳಿಕ ಪೊಲೀಸರ ಥಳಿತದಿಂದ ತೀವ್ರವಾಗಿ ಗಾಯಗೊಂಡು ಠಾಣೆಯಲ್ಲೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಭಾನುವಾರ ಬೆಳಗ್ಗೆ ಲಕ್ಷ್ಮೇಶ್ವರ ಠಾಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ರಿಕ್ತ ಜನರು ಠಾಣೆಯ ಮೇಲೆಯೆ ದಾಳಿ ನಡೆಸಿದ್ದು ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಿದ್ದಾರೆ. ಠಾಣೆಯ ಪೀಠೊಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

ಠಾಣೆಯ ಬಳಿ ಸಾವಿರಾರು ಜನರು ಜಮಾಯಿಸಿದ್ದು ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

ಸೂಕ್ಷ್ಮ ಪಟ್ಟಣದಲ್ಲಿ ಈಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಎಸ್‌ಪಿ ಕೆ.ಸಂತೋಷ್‌ ಬಾಬು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

No Comments

Leave A Comment