Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಅಫ್ಘಾನಿಸ್ತಾನದಲ್ಲಿ ಭಾರಿ ಹಿಮಪಾತ: 54 ಮಂದಿ ಸಾವು

ಕಾಬುಲ್: ಅಫ್ಘಾನಿಸ್ತಾನದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಸುರಿಯುತ್ತಿದ್ದು, ಹಿಮಪಾತಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ ಭಾನುವಾರ 54ಕ್ಕೆ ಏರಿಕೆಯಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕೇಂದ್ರ ಮತ್ತು ಈಶಾನ್ಯ ಪ್ರಾಂತ್ಯಗಳಲ್ಲಿ ಹಿಮಪಾತದಿಂದಾಗಿ ಹಲವು ಮನೆಗಳು ಮತ್ತು ರಸ್ತೆಗಳು ನಾಶವಾಗಿವೆ ಎಂದು ನೈಸರ್ಗಿಕ ವಿಪತ್ತುಗಳು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಹಿಮಪಾತದಿಂದಾಗಿ ಇದುವರೆಗೆ 54 ಮಂದಿ ಮೃತಪಟ್ಟಿದ್ದಾರೆ ಮತ್ತು 52 ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ನೈಸರ್ಗಿಕ ವಿಪತ್ತುಗಳು ಸಚಿವಾಲಯದ ವಕ್ತಾರ ಮೊಹಮ್ಮದ್ ಒಮರ್ ಮೊಹಮ್ಮದಿ ಅವರು ಹೇಳಿದ್ದಾರೆ.

ಭಾರಿ ಹಿಮಪಾತದಿಂದಾಗಿ ಒಟ್ಟು 168 ಮನೆಗಳು ಕುಸಿದು ಬಿದ್ದಿವೆ ಮತ್ತು 340 ಜಾನುವಾರಗಳು ಸಾವನ್ನಪ್ಪಿವೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment