Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ತಮಿಳುನಾಡು ಭಾವಿ ಸಿಎಂ ಶಶಿಕಲಾ ಪತಿ ನಟರಾಜನ್ ಆಸ್ಪತ್ರೆಗೆ ದಾಖಲು!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಿದ್ಧವಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಅವರ ಪತಿ ಎಂ ನಟರಾಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಎಂ ನಟರಾಜನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಐಎಡಿಎಂಕೆ ಪಕ್ಷ ತಿಳಿಸಿದೆ. ” ನಟರಾಜನ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದಷ್ಟೇ ಎಐಎಡಿಎಂಕೆ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ.

ನಟರಾಜನ್ ಅವರ ಪತ್ನಿ, ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರನ್ನು ಫೆ.6 ರಂದು ಎಐಎಡಿಎಂಕೆಯ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಶಶಿಕಲಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

No Comments

Leave A Comment