Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಭಾರಿ ಭೂ ಕುಸಿತ; ಜಮ್ಮು ಮತ್ತು ಶ್ರೀನಗರ ಹೈವೇ ಬಂದ್!

ಉದ್ಧಂಪುರ: ಹವಾಮಾನ ವೈಪರೀತ್ಯದಿಂದಾಗಿ ಒಂದೆಡೆ ಭಾರಿ ಹಿಮಪಾತದಿಂದಾಗಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಲುಗುತ್ತಿರುವಂತೆಯೇ ಇತ್ತ ತೇವಾಂಶದಿಂದಾಗಿ ಸೋಮವಾರ ಭಾರಿ ಕುಸಿತ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಬಳಿ ಇರುವ ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನು ಘಟನೆಯಲ್ಲಿ ಸಾವುನೋವುಗಳಾದ ಕುರಿತು ಈ ವರೆಗೂ  ವರದಿಯಾಗಿಲ್ಲ.

ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಪ್ರದೇಶಕ್ಕೆ ರಕ್ಷಣಾ ಸಿಬ್ಬಂದಿಗಳು ದೌಡಾಯಿಸಿದ್ದು, ರಸ್ತೆ ಮೇಲೆ ಬಿದ್ದಿರುವ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳ ರಾಶಿ ರಸ್ತೆ ಮೇಲೆ ಬಿದ್ದಿದ್ದು, ಅವುಗಳನ್ನು ತೆರವುಗೊಳಿಸಲು ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ. ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದ್ದು, ಕನಿಷ್ಠ 2  ದಿನಗಳ ಕಾಲವಾದರೂ ಹೆದ್ದಾರಿಯಲ್ಲಿ ರಸ್ತೆ ಅಸ್ಚವ್ಯಸ್ಥವಾಗಿರಲಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment