ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥರ ಭೇಟಿ
ಜಗದ್ಗುರು ಶ್ರೀ ಮಧ್ವಾಚಾರ್ಯರ ಸಪ್ತಶತಮಾನೋತ್ಸವದ ಅಂಗವಾಗಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರವರನ್ನು ಪರ್ಯಾಯ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಉಪಸ್ಥಿತರಿದ್ದರು.