Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕಾರವಾರ: ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆ ವಶ

ಕಾರವಾರ: ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸುತ್ತಿದ್ದ ಎರಡು ಲಾರಿ ಅಡಿಕೆಯನ್ನು ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಿಂದ‌ ಮುಂಬೈ ಹಾಗೂ ನಾಗಪುರಕ್ಕೆ ಸಾಗುತ್ತಿದ್ದ ಲಾರಿಗಳನ್ನು ಕಾರವಾರದ ಬಿಣಗಾ ಹಾಗೂ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ವಶಕ್ಕೆ ಪಡೆಯಲಾಗಿದೆ.

ಸುಮಾರು 50 ಲಕ್ಷಕ್ಕೂ ಅಧಿಕ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಅಡಿಕೆಯನ್ನು ತೆರಿಗೆ ಕಟ್ಟದೆ ಹೊರ ರಾಜ್ಯಕ್ಕೆ ಕಳುಹಿಸಲಾಗುತ್ತಿತ್ತು.

ಯಲ್ಲಾಪುರ ಠಾಣಾ ಹಾಗೂ ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಇದಾಗಿದ್ದು, ಡಿಸಿಐಬಿ ಇನ್‌ಸ್ಪೆಕ್ಟರ್ ಆಂಜನೇಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

No Comments

Leave A Comment