Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ವಿದ್ಯಾರ್ಥಿನಿ ಸೌಜನ್ಯ ಕೊಲೆ ಕೇಸ್ ಮರು ತನಿಖೆ: ಸಿಬಿಐ ಕೋರ್ಟ್

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ವಿವಾದಕ್ಕೊಳಗಾದ ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಸಿಬಿಐ ಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.

ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿ ದೂರು ನೀಡಿದ್ದರು. ಈ ಪ್ರಕರಣ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.

ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ತೀವ್ರ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸಿಬಿಐಗೆ ವಹಿಸಲಾಗಿತ್ತು. ತನಿಖೆ ಬಳಿಕ ಸಿಬಿಐ 14 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ದೋಷ ಇದ್ದಿರುವುದಾಗಿ ಸೌಜನ್ಯ ತಂದೆ ವಕೀಲರ ಮೂಲಕ ಸಿಬಿಐ ಕೋರ್ಟ್ ಗಮನಕ್ಕೆ ತಂದು ಮರು ತನಿಖೆಗೆ ಆದೇಶ ನೀಡಬೇಕೆಂದು ಮೇಲ್ಮನವಿ ಸಲ್ಲಿಸಿದ್ದರು.

ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಕುಟುಂಬದವರ ಮೇಲೂ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಹೆಗ್ಗಡೆ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿತ್ತು.

No Comments

Leave A Comment