Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಶಶಿಕಲಾಗೆ ಶಾಕ್: ಅಕ್ರಮ ಆಸ್ತಿ ತೀರ್ಪು ಬರುವವರೆಗೆ ಕಾಯಲು ರಾಜ್ಯಪಾಲರ ನಿರ್ಧಾರ

ಚೆನ್ನೈ: ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವವರೆಗೆ ಇನ್ನೊಬ್ಬ ಆರೋಪಿ ಶಶಿಕಲಾ ಅವರಿಗೆ ಮುಖ್ಯಮಂತ್ರಿಯಾಗಿ ರಾಜ್ಯಪಾಲರು ಪ್ರಮಾಣವಚನ ಬೋಧಿಸದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಶಿಕಲಾ ವಿರುದ್ಧದ ಅಕ್ರಮ ಆಸ್ತಿ  ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಶೀಘ್ರವೇ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆಯಿದ್ದು ಅಲ್ಲಿಯವರೆಗೂ ಕಾಯಲು ಗವರ್ನರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.ತಮಿಳುನಾಡು ರಾಜಕೀಯ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ  ರಾಜ್ಯಪಾಲರು ಯಾವುದೇ ವರದಿ ಕಳುಹಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ಮುಖ್ಯಸ್ಥೆ ವಿ.ಕೆ. ಶಶಿಕಲಾ ಅವರನ್ನು ನೇಮಿಸುವುದಕ್ಕೆ ಸಂಬಂಧಿಸಿ ರಾಜ್ಯಪಾಲ ಸಿ.ಎಚ್‌ ವಿದ್ಯಾಸಾಗರ್‌ ರಾವ್‌ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ  ರಾಜಕೀಯ ಬಿಕ್ಕಟ್ಟು ಮುಂದುವರಿದಿದೆ.ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ಅಥವಾ  ಶಶಿಕಲಾ ವಿರುದ್ಧ ಬಂಡಾಯ ಎದ್ದಿರುವ ತಮಿಳುನಾಡಿನ ಉಸ್ತುವಾರಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರನ್ನು ಮುಂದುವರಿಸಲು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಇಷ್ಟವಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನೂ ನಿನ್ನೆ ಸಂಜೆ ರಾಜಭವನದಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ತಮಿಳುನಾಡು ರಾಜಕೀಯ ಅತಂತ್ರ ಸ್ಥಿತಿ ಬಗ್ಗೆ ಎರಡು ಪುಟಗಳ ಮಾಹಿತಿ ರವಾನೆಯಾಗಲಿದೆ ಎಂದು ಹೇಳಲಾಗಿದೆ. ಆದರೆ ಇದಕ್ಕೆ ಯಾವುದೇ ಅಧಿಕಾರಿಯ ಸಹಿ ಅಥವಾ ಕಳುಹಿಸಿದವರ ವಿಳಾಸ ಇಲ್ಲ ಎಂದು ಹೇಳಲಾಗಿದೆ.

ಪ್ರಸಕ್ತವಾಗಿ ತಮಿಳುನಾಡಿನಲ್ಲಿ ಅಪರೂಪದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜೀನಾಮೆ ನೀಡಿದ್ದ ಪನ್ನೀರ್ ಸೆಲ್ವಂ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಿದ್ದಾರೆ. ಸರ್ಕಾರ ರಚಿಸಲು ಬಯಸಿರುವ ಶಶಿಕಲಾ ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್‌, ಪೊಲೀಸ್‌ ಮಹಾನಿರ್ದೇಶಕ ಟಿ.ಕೆ ರಾಜೇಂದ್ರನ್‌, ಮತ್ತು ಚೆನ್ನೈ ನಗರ ಪೊಲೀಸ್‌ ಆಯುಕ್ತ ಎಸ್‌. ಜಾರ್ಜ್‌ ಅವರನ್ನು ಕರೆಸಿ ರಾಜ್ಯಪಾಲರು ಚರ್ಚೆ ನಡೆಸಿದ್ದಾರೆ. ಶಾಸಕರನ್ನು ಕೂಡಿ ಹಾಕಿದೆ ಎಂಬ ಆರೋಪದ ಸಂಬಂಧ ಅವರನ್ನು ಪತ್ತೆ ಹಚ್ಚಲು ನಿರ್ದೇಶನ ನೀಡಿ, ಪೊಲೀಸರು ಇಬ್ಬರಲ್ಲಿ ಯಾರ ಪರವಾಗಿಯೂ ನಿಲ್ಲದೇ ಪ್ರಾಮಾಣಿಕತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ.

No Comments

Leave A Comment