Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಮೈಸೂರು: ಶ್ರೀಗಂಧ ಕಳ್ಳರ ಮೇಲೆ ಶೂಟೌಟ್,ಓರ್ವ ಸಾವು


ಮೈಸೂರು:
ಶ್ರೀಗಂಧ ಮರ ಕದಿಯಲು ಬಂದಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದಾನೆ.

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಲಿಂಗಾಬುದಿ ಕೆರೆ ಆವರಣದಲ್ಲಿ ಮಧ್ಯರಾತ್ರಿ ಎರಡೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಕಾರ್ಯಾಚರಣೆ ಹಿನ್ನೆಲೆಯಲ್ಲಿ ಲಿಂಗಾಬುದಿ ಕೆರೆಯ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

5 ಕ್ಕೂ ಹೆಚ್ಚು ಮಂದಿಯಿದ್ದ ಶ್ರೀಗಂಧ ಚೋರರ ತಂಡ ಮರಕಳವಿಗೆ ಯತ್ನಿಸಿದ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment