Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ತಮಿಳುನಾಡಿನಲ್ಲಿ ದೇವಾಲಯದೇದುರೇ AIADMK ಮುಖಂಡನ ಕೊಚ್ಚಿ ಕೊಲೆ

ತಿರುವಣ್ಣಾಮಲೈ: ಇಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ  ದೇವಾಲಯವೊಂದರ ದುರೇ ಎಐಎಡಿಎಂಕೆ ಮುಖಂಡನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ.

ಅರುಣಾಚಲ ದೇಗುಲದ ಎದುರು ಬೆಳಿಗ್ಗೆ ವಾಕಿಂಗ್‌ ಮಾಡುತ್ತಿದ್ದ ತಿರುವಣ್ಣಾಮಲೈ ಘಟಕದ ಕಾರ್ಯದರ್ಶಿ ಕನಕರಾಜ್‌ ಎನ್ನುವವರ ಮೇಲೆ ಮೂವರು ದುಷ್ಕರ್ಮಿಗಳು ಮಾರಾಕಾಯುಧಗಳಿಂದ ಬರ್ಬರವಾಗಿ ಕೊಚ್ಚಿದ್ದಾರೆ. ಪರಿಣಾಮವಾಗಿ ಸ್ಥಳದಲ್ಲೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತ ಕಣ್ಣದಾಸನ್‌ ಎನ್ನುವವ ಮೇಲೂ ದಾಳಿ ನಡೆಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹತ್ಯೆಗೈದ ಬಳಿಕ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಶೇಖರ್‌, ಬಾಬು ಮತ್ತು ಶರವಣ ಎನ್ನುವ ಮೂವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment