Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಟೀಂ ಇಂಡಿಯಾಗೆ ಅಂಧರ ಟಿ20 ವಿಶ್ವಕಪ್ ಕಿರೀಟ

ಬೆಂಗಳೂರು: ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗುಬಡಿದು ಟೀಂ ಇಂಡಿಯಾ ಎರಡನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 197 ರನ್ ಗಳಿಸಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 198 ರನ್ ಗಳ ಬೃಹತ್ ಮೊತ್ತದ ಸವಾಲು ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾ ಪರ ಪ್ರಕಾಶ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ಭಾರತ ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿದೆ.

2012ರ ಅಂಧರ ಟಿ20 ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು ಇದರಲ್ಲಿ ಭಾರತ 29 ರನ್ ಗಳಿಂದ ಪಾಕಿಸ್ತಾನವನ್ನು ಮಣಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟಿತ್ತು.

No Comments

Leave A Comment