Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬಂಡಿಪೋರ ಎನ್ ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, 5 ಯೋಧರಿಗೆ ಗಾಯ

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿಯುವಲ್ಲಿ ಮಂಗಳವಾರ ಯಶಸ್ವಿಯಾಗಿದೆ.

ಬಂಡಿಪೋರದ ಹಜಿನ್ ಪ್ರದೇಶದಲ್ಲಿರುವ ಪರ್ರೆ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.ಕೂಡಲೇ ಸ್ಥಳದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಉಗ್ರರ ದಾಳಿಗೆ ಸೇನೆ ದಿಟ್ಟವನ್ನು ನೀಡಲು ಮುಂದಾಗಿತ್ತು. ಗುಂಡಿನ ಕಾಳಗದಲ್ಲಿ ಐವರು ಯೋಧರು ಗಾಯಗೊಂಡಿದ್ದರು.

ನಂತರ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದ ಸೇನೆ, ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿ ವೇಳೆ ಕೆಲ ನಾಗರೀಕರಿಗೂ ಗಾಯಗಳಾಗಿರುವುದಾಗಿ ವರದಿಗಳು ತಿಳಿಸಿವೆ. ಹತ್ಯೆಯಾದ ಉಗ್ರ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment