Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಉಡುಪಿ ಗೃಹ ರಕ್ಷಕ ದಳ- ಚಾಂಪಿಯನ್ ಪ್ರಶಸ್ತಿ

ಉಡುಪಿ: ಕರ್ನಾಟಕ ರಾಜ್ಯ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಇಲಾಖೆ ವತಿಯಿಂದ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಶ್ಚಿಮ ವಲಯದಿಂದ ಡೆಪ್ಯುಟಿ ಕಮಾಂಡೆಂಟ್ ರಮೇಶ್ ರವರ ಮುಂದಾಳತ್ವದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳು ಮಹಿಳೆಯರ ವಿಭಾಗದಲ್ಲಿ 100 ಮೀ ಓಟದಲ್ಲಿ ಪ್ರಥಮ, 4*100 ಮೀ ರಿಲೇ ಪ್ರಥಮ, ಪುರುಷರ ವಿಭಾಗದಲ್ಲಿ 100 ಮೀ ಪ್ರಥಮ, 800 ಮೀ ದ್ವಿತೀಯ, 4*100 ರಿಲೇ ದ್ವಿತೀಯ, ವಾಲಿಬಾಲ್ ದ್ವಿತೀಯ ಹಾಗೂ ಕಬ್ಬಡಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಪಡೆದು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ .

ಈ ಎಲ್ಲಾ ಕ್ರೀಡಾಪಟುಗಳಿಗೆ ಉಡುಪಿ ಜಿಲ್ಲೆಯ ಜಿಲ್ಲಾ ಸಮಾದೇಷ್ಟರಾದ ಡಾ.ಕೆ. ಪ್ರಶಾಂತ್ ಶೆಟ್ಟಿ ಇವರು ಶುಭಾಶಯವನ್ನು ತಿಳಿಸಿರುತ್ತಾರೆ.

No Comments

Leave A Comment