Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಉತ್ತರಪ್ರದೇಶ, ಉತ್ತರಾಖಂಡ್‌ ರಾಜ್ಯದಲ್ಲಿ ಶಾಂತಿಯುತ ಮತದಾನ

ನವದೆಹಲಿ: ಉತ್ತರಪ್ರದೇಶದಲ್ಲಿ 2ನೇ ಹಂತ ಹಾಗೂ ಉತ್ತರಾಖಂಡ್‌ನಲ್ಲಿ ಮೊದಲನೇ ಹಂತದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ಇಲ್ಲಿಯವರೆಗೂ ಉತ್ತರಪ್ರದೇಶದಲ್ಲಿ ಶೇ.30 ಹಾಗೂ ಉತ್ತರಾಖಂಡ್ ರಾಜ್ಯದಲ್ಲಿ ಶೇ.35 ರಷ್ಟು ಮತದಾನವಾಗಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ.

ಉತ್ತರಾಖಂಡ್ ರಾಜ್ಯದಲ್ಲಿ 69 ವಿಧಾನಸಭಾ ಕ್ಷೇತ್ರಗಳಲ್ಲಿ 628 ಅಭ್ಯರ್ಥಿಗಳ ಹಣೆ ಬರಹ ಮತಪೆಟ್ಟಿಗೆಗೆ ಬೀಳಲಿದೆ. ಇಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ತೀವ್ರ ಹಣಾಹಣಿ ನಡೆಯಲಿದೆ.

ಉತ್ತರಪ್ರದೇಶದಲ್ಲಿ 67 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. 720 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಮಾಜವಾದಿ ಪಕ್ಷ, ಬಿಎಸ್‌ಪಿ ಮತ್ತು ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಇದೆ.

ಈವರೆಗೂ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

No Comments

Leave A Comment