Log In
BREAKING NEWS >
ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಜಿಲ್ಲೆಯಲ್ಲಿ ಶೀಘ್ರ ಜನೆರಿಕ್ ಔಷಧ ಕೇಂದ್ರ- ಸಚಿವ ಪ್ರಮೋದ್

ಉಡುಪಿ: ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಔಷಧ ಮಾರಾಟ ಮಾಡುವ ಜನೆರಿಕ್ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಜನೆರಿಕ್ ಔಷಧ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲಿ ಕೇಂದ್ರವನ್ನು ತೆರೆಯಲಾಗುವುದು, ಈ ಕೇಂದ್ರದಲ್ಲಿ ರೋಗಿಗಳಿಗೆ ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಔಷಧಗಳು ಲಭ್ಯವಾಗಲಿವೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿದ ಸಚಿವರು, ವಲಸೆ ಕಾರ್ಮಿಕ ಮಹಿಳೆಯರ ಆರೋಗ್ಯ ವಿಶೇಷ ಗಮನ ಹರಿಸುವಂತೆ ಹಾಗೂ ವಿಶೇಷ ಅಭಿಯಾನ ಕೈಗೊಂಡು ಅವರನ್ನು ಗುರುತಿಸಿ ಸೇವೆ ಒದಗಿಸುವಂತೆ ಸೂಚಿಸಿದರು.

ಜಿಲ್ಲೆಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಹಾಗೂ ಔಷಧಗಳ ಕೊರತೆಯಾದಗಂತೆ ನೋಡಿಕೊಳ್ಳುವಂತೆ ಸೂಚಿಸಿದ ಸಚಿವರು, ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಪ್ರಚಾರ ಮಾಡುವಾಗ ಶಿಕ್ಷಣ ಇಲಾಖೆಯ ಸಹಕಾರ ಪಡೆಯುವಂತೆ, ಹಾಗೂ ಇಲಾಖೆಯ ಸಮಸ್ಯೆಗಳ ಬಗ್ಗೆ ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು , ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಡಿಹೆಚ್‍ಓ ಡಾ. ರೋಹಿಣಿ ಹಾಗೂ ಜಿಲ್ಲೆಯ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು

No Comments

Leave A Comment