Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಪ್ರಮಾಣ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಆಪ್ತ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಗುರುವಾರ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಮಧ್ಯಾಹ್ನ 4.30ರ ಸುಮಾರಿಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರು ಪಳನಿಸ್ವಾಮಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಕುರ್ಚಿಗಾಗಿ ನಡೆದ ಹೋರಾಟದಲ್ಲಿ ಶಶಿಕಲಾ ಬಣದ ಕೈ ಮೇಲಾಗಿದ್ದು, ಪಳನಿಸ್ವಾಮಿಗೆ 15  ದಿನದೊಳಗೆ ಬಹುಮತ ಸಾಬೀತುಪಡಿಸಬೇಕಾಗಿದೆ.

ಪಳನಿಸ್ವಾಮಿಯೊಂದಿಗೆ 30 ಶಾಸಕರು ಸಹ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಈಗಾಗಲೇ ಖಾತೆಗಳನ್ನು ಸಹ ಹಂಚಿಕೆ ಮಾಡಲಾಗಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಭಾವಿ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಇತ್ತೀಚೆಗಷ್ಟೆ ಎಐಎಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೆ.ಎ ಸೆಂಗೊಟ್ಟಯನ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕ್ರೀಡಾ ಮತ್ತು ಯುವ ಜನ ಸೇವೆ ಖಾತೆಗಳನ್ನು ನೀಡಲಾಗಿದೆ.

No Comments

Leave A Comment