Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಚಾಮರಾಜನಗರದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಾಮರಾಜನಗರ: ಚಾಮರಾಜನಗರ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಚಾಮರಾಜೇಶ್ವರ ದೇವಾಲಯ ಚಾಮರಾಜನಗರ ಇತಿಹಾಸ ಪ್ರಸಿದ್ಧ ದೇವಾಲಯವಾಗಿದ್ದು ಆಷಾಢ ಮಾಸದಲ್ಲಿ ಇಲ್ಲಿ ರಥೋತ್ಸವ ನಡೆಯುತ್ತಿತ್ತು. ಆದರೆ ಕಳೆದ ಮಧ್ಯರಾತ್ರಿ ಕಿಡಿಗೇಡಿಗಳು ರಥಕ್ಕೆ ಬೆಂಕಿ ಹಚ್ಚಿದ್ದು ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ರಥದ ಎಡಭಾಗಕ್ಕೆ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

No Comments

Leave A Comment