Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕಡಬಗೆರೆ ಶೂಟೌಟ್ ಕೇಸ್, ಮತ್ತೆ ಐವರ ಬಂಧನ; 24 ವೆಪನ್ಸ್ ವಶ

ಬೆಂಗಳೂರು: ಕಡಬಗೆರೆ ಶ್ರೀನಿವಾಸ್ ಮೇಲಿನ ಹತ್ಯಾ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದ ವಿಶೇಷ ತಂಡ ಮತ್ತೆ ಐವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಡಕಾಯಿತಿಗೆ ಹೊಂಚು ಹಾಕಿ ಕುಳಿತಿದ್ದ ವೇಳೆ ಸೈಲೆಂಟ್ ಸುನೀಲ್, ಒಂಟೆ ರೋಹಿತ್ ಸಹಚರರಾದ ಮೀಟರ್ ಮೋಹನ್, ನಾಗ, ಬಸವ, ಶಿವ ಸೇರಿ ಐದು ಮಂದಿಯನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.

ಬಂಧಿತರಿಂದ 24 ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಕಡಬಗೆರೆ ಮೇಲೆ ಶೂಟೌಟ್ ಮಾಡಿದ ಪಿಸ್ತೂಲ್ ಕೂಡಾ ಸೇರಿದ್ದು, ಅದನ್ನು ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment