Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ನಿಟ್ಟೂರು ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ

ಉಡುಪಿ : ದಿನಾಂಕ 23-01-2017ರಂದು ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಕೊಡಲ್ಪಟ್ಟ ಉಚಿತ ಸೈಕಲ್‍ಗಳ ವಿತರಣಾ ಕಾರ್ಯಕ್ರಮ ಜರಗಿತು. ಶಾಲಾ ಹಳೆವಿದ್ಯಾರ್ಥಿ, ಉಡುಪಿ ನಗರ ಸಭೆಯ ಸ್ಥಾಯಿಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾಸುರೇಶ್ ಸೈಕಲ್‍ಗಳನ್ನು ವಿತರಿಸಿ, ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದು ಕಲಿಕೆಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿ ಶ್ರೀಮತಿ ಮೀನಾಕ್ಷಿ ಭಂಡಾರಿ ವಿದ್ಯಾರ್ಥಿಗಳಿಗೆ ಸರ್ಕಾರದ ಈ ಯೋಜನೆಯ ಔಚಿತ್ಯವನ್ನು ಕುರಿತು ಮನವರಿಕೆ ಮಾಡುತ್ತಾ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶೋಭಾಸುರೇಶ್ ಅವರನ್ನು ಸನ್ಮಾನಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ವಿ. ಭಟ್, ಕಾರ್ಯದರ್ಶಿ ಭಾಸ್ಕರ ಡಿ. ಸುವರ್ಣ, ನಿವೃತ್ತ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಭಟ್, ಆಡಳಿತ ಮಂಡಳಿ ಸದಸ್ಯರಾದ ದಿನೇಶ್ ಪೂಜಾರಿ ಪುತ್ತೂರು, ಕೃಷ್ಣಮೂರ್ತಿ ಭಟ್, ರಾಮಚಂದ್ರ ಆಚಾರ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ವಿದ್ಯಾರ್ಥಿನಿ ರಕ್ಷಿತಾ ನಿರೂಪಿಸಿದರು. ಅರ್ಚನಾ ವಂದನಾರ್ಪಣೆ ಗೈದರು.

No Comments

Leave A Comment