Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಶಿಕ್ಷಣದಿಂದ ಸಾಮಾಜಿಕ ನ್ಯಾಯ- ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಉಡುಪಿ: ಸಮಾನ ಶಿಕ್ಷಣ, ಅವಕಾಶ, ತರಬೇತಿಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ; ಸಾಮಾಜಿಕ ನ್ಯಾಯದ ಮೂಲಸಿದ್ಧಾಂತ ಪರಿಣಾಮಕಾರಿ ಅನುಷ್ಠಾನಕ್ಕೆ ಶಿಕ್ಷಣ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟೇಶ ನಾಯ್ಕ್ ಟಿ ಹೇಳಿದರು.

ಅವರಿಂದು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ ಮತ್ತು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ-2017’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬನನ್ನು ಆರ್ಥಿಕ, ಸಾಮಾಜಿಕವಾಗಿ ಮೇಲಕ್ಕೆತ್ತಲು ಸಾಮಾಜಿಕ ನ್ಯಾಯದ ಮೂಲಸಿದ್ಧಾಂತವನ್ನು ಜಾರಿಗೆ ವಿಶ್ವಸಂಸ್ಥೆಯ ನಿರ್ದೇಶನದ ಮೇರೆಗೆ 2009ರಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಗುತ್ತಿದೆ.

ಹಾಗಾಗಿ ಇದು ಪ್ರತಿಭೆ ಕೇಂದ್ರೀಕೃತ ಪ್ರಶ್ನೆ ಇಲ್ಲ; ಸಮಾನತೆಗಾಗಿ ಪ್ರತಿಯೊಬ್ಬರನ್ನು ಎಲ್ಲ ರೀತಿಯಲ್ಲೂ ಉತ್ತಮವಾಗಿ ಬಾಳಿ ಬದುಕಲು ಅವರಿಗೆ ಪೂರಕ ವ್ಯವಸ್ಥೆಗಳನ್ನು ಮಾಡಬೇಕಿದೆ. ಮಾನವ ಸಂಪನ್ಮೂಲದ ಸದ್ಬಳಕೆಯಾಗಬೇಕಿದೆ. ಶೈಕ್ಷಣಿಕ ವ್ಯವಸ್ಥೆ ಬಗ್ಗೆ ತಾತ್ಸಾರ ಸಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಶಿವರಾಮ ಕೆ ಅವರು, ಪ್ರಸ್ತುತ ಸಾಮಾಜಿಕ ಅನ್ಯಾಯಗಳು ವರದಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದಾಗುವ ಪ್ರತಿಕೂಲ ವಾತಾವರಣ ನಿವಾರಣೆಯಾಗಬೇಕಿದೆ; ಬಡತನ ನಿವಾರಣೆಯಾಗಬೇಕಿದೆ ಎಂದರು.

ಕಾನೂನು ಕಾಲೇಜಿನ 10 ವಿದ್ಯಾರ್ಥಿಗಳು ಸಾಮಾಜಿಕ ನ್ಯಾಯದ ಬಗ್ಗೆ ಪೇಪರ್ ಪ್ರಸಂಟೇಷನ್ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಲತಾ, ರಾಜೇಶ್ ಕರ್ಣಂ ಕೆ., ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರ. ದ. ನ್ಯಾ ದಂಡಾಧಿಕಾರಿ ವಿ ಎನ್ ಮಿಲನ, ಎಂ ಮಂಜುನಾಥ, ಝರೀಫಾಭಾನು ಪಾಲ್ಗೊಂಡರು. ವಿದ್ಯಾರ್ಥಿ ಹಿತರಕ್ಷಣಾ ಅಧಿಕಾರಿ ರೋಹಿತ್ ಅಮೀನ್ ಇದ್ದರು. ಸಹನಾ ಕುಂದರ್ ಸ್ವಾಗತಿಸಿದರು.

No Comments

Leave A Comment