Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಬಾಗ್ದಾದ್’ನಲ್ಲಿ ಕಾರ್ ಬಾಂಬ್ ಸ್ಫೋಟ: 7 ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್’ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.

ಪಶ್ಚಿಮ ಬಾಗ್ದಾದ್’ನ ಅಮೇರಿಯಾ ಪ್ರದೇಶದ ಬಳಿ ಉಗ್ರರು ಕಾರ್ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಹಲವಾರು ಅಂಗಡಿಗಳು ನಾಶಗೊಂಡಿವೆ. ಅಲ್ಲದೆ, ಹಲವು ನಾಗರೀಕರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಕಟ್ಟಡಗಳೂ ನಾಶಗೊಂಡಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಫೋಟ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಆಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು ಗಾಯಾಳುಗಳನ್ನು ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದಾಳಿ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಆದರೆ, ಬಾಗ್ದಾದ್ ನಲ್ಲಿ ಈವರೆಗೂ ನಡೆದಿರುವ ಬಾಂಬ್ ಸ್ಫೋಟಗಳನ್ನು ಇಸಿಸ್ ಉಗ್ರ ಸಂಘಟನೆಯೇ ನಡೆಸಿರುವುದರಿಂದ ಸ್ಫೋಟವನ್ನು ಇದೇ ಸಂಘಟನೆಯೇ ದಾಳಿ ನಡೆಸಿರಬಹುದೆಂದು ಶಂಕಿಸಲಾಗಿದೆ.

No Comments

Leave A Comment