Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಫಿನಾಯಿಲ್‌ ಕುಡಿದು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿ ಶೀಟರ್‌

ಬೆಂಗಳೂರು: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲೆ ಯಲಹಂಕದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದಿದ್ದ ಸಂಪಿಗೆ ಹಳ್ಳಿಯ ರೌಡಿ ಶೀಟರ್‌ ಓರ್ವ ಠಾಣೆಯಲ್ಲೇ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ನಿನ್ನೆ ಮಧ್ಯಾಹ್ನ ಪೊಲೀಸರು ವಶಕ್ಕೆ ಪಡೆದಿದ್ದ ಅನಿಲ್‌(30) ಎಂಬ ರೌಡಿಶೀಟರ್‌ ಸಂಪಿಗೆ ಹಳ್ಳಿಯ ಠಾಣೆಯ ಶೌಚಾಲಯದಲ್ಲಿದ್ದ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ಇದೀಗ ಅನಿಲ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖೀಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.(ಸಾಂದರ್ಭಿಕ ಚಿತ್ರ ಮಾತ್ರ)

 

No Comments

Leave A Comment