Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಟಿಪ್ಪರ್ ಲಾರಿ ಡಿಕ್ಕಿ ಅಪಘಾತ: ಲೋಕಾಯುಕ್ತ ಎಸ್ಪಿ ಸಹಿತ ಇಬ್ಬರ ಸಾವು

ರಾಮನಗರ: ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೈಸೂರು ಲೋಕಾಯುಕ್ತ ಎಸ್‌ಪಿ ರವಿಕುಮಾರ್ (34)  ಸಹಿತ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

ರವಿಕುಮಾರ್‌ ಅವರು ತಮ್ಮ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ವಾಪಸ್‌ ತೆರಳುವಾಗ ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿ ಬಳಿ ಈ ದುರ್ಘಟನೆ ನಡೆಯಿತು.

‘ಟಿಪ್ಪರ್‌ ವಾಹನವು ರಸ್ತೆ ವಿಭಜಕವನ್ನು ದಾಟಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಯಾಯಿತು. ಬಳಿಕ ಆಟೊ ಮತ್ತಿತರ ವಾಹನಗಳಿಗೂ ಡಿಕ್ಕಿ ಹೊಡೆ ಯಿತು. ಇದರಿಂದ ಕಾರಿನಲ್ಲಿದ್ದ ರವಿಕುಮಾರ್ ಹಾಗೂ ಚಾಲಕ ಕಿರಣ್‌ಕುಮಾರ್‌ ಸ್ಥಳದಲ್ಲಿಯೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದರು.

ರವಿಕುಮಾರ್‌–ಅನಿತಾ ದಂಪತಿಗೆ  ಎಂಟು ದಿನಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಗ್ರಾಮದ ರವಿಕುಮಾರ್‌, ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಶಿಕ್ಷಣ ಪೂರೈಸಿದ ಬಳಿಕ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದರು. ಪೊಲೀಸ್‌ ಅಧಿಕಾರಿಯಾಗುವ ಹಂಬಲದಿಂದ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿ ಪರೀಕ್ಷೆ ತೆಗೆದುಕೊಂಡಿದ್ದರು. 2008ರಲ್ಲಿ ಡಿವೈಎಸ್‌ಪಿ ಆಗಿ ಪೊಲೀಸ್‌ ಇಲಾಖೆ ಸೇರಿದ್ದರು.

ಎಸಿಪಿ ಆಗಿ ಮಂಗಳೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಕೆಲಸ ಮಾಡಿದ್ದಾರೆ. ಬಡ್ತಿ ಪಡೆದ ಬಳಿಕ ಲೋಕಾಯುಕ್ತಕ್ಕೆ ನಿಯೋಜನೆಗೊಂಡರು. ಒಂದೂವರೆ ವರ್ಷದಿಂದ ಮೈಸೂರಿನ ಲೋಕಾಯುಕ್ತ ಎಸ್‌ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

No Comments

Leave A Comment