Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಕೆಪಿಎಸ್‌ಸಿ ಸಂದರ್ಶನ:1:5 ಅನುಪಾತಕ್ಕೆ ಸಂಪುಟ ಅಸ್ತು

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸುವ ಸಂದರ್ಶನಕ್ಕೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಕರೆಯುವ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಸ್ತುತ 1:3 ಅನುಪಾತ ಇರುವ ಈ ಪ್ರಮಾಣ ಇನ್ನು ಮುಂದೆ 1:5 ಆಗಲಿದೆ. ಹೀಗಾಗಿ, ಕೆಪಿಎಸ್‌ಸಿ ನಡೆಸುವ ನೇಮಕಾತಿಗಳಿಗೆ ಒಂದು ಹುದ್ದೆಗೆ ಐವರನ್ನು ಸಂದರ್ಶನಕ್ಕೆ ಕರೆಯಬಹುದಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಕೆಪಿಎಸ್‌ಸಿಯಲ್ಲಿ ಇದುವರೆಗೂ ಒಂದು ಹುದ್ದೆಗೆ ಮೂವರನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತಿತ್ತು. ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎಂದು ಸರಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು. ಇನ್ನು ಮುಂದೆ ಕೆಪಿಎಸ್‌ಸಿ ಮೂಲಕ ನೇಮಕ ಮಾಡುವ ಎಲ್ಲ ಹುದ್ದೆಗಳಿಗೂ ಇದೇ ನಿಯಮ ಅನ್ವಯ ಆಗಲಿದೆ. ಸಂದರ್ಶನಕ್ಕೆ ಅನುಪಾತವನ್ನು ಹೆಚ್ಚಳ ಮಾಡುವಂತೆ ಸಾಕಷ್ಟು ಬೇಡಿಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಭೆಗಳಿಗೆ ಅನ್ಯಾಯವಾಗಬಾರದು ಎಂದು ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.

362 ಹುದ್ದೆಗಳ ನೇಮಕ ತೀರ್ಮಾನ ಮುಂದೂಡಿಕೆ
2011ರ ಪ್ರೊಬೆಷನರಿ ಗೆಜೆಟೆಡ್‌ 362 ಹುದ್ದೆಗಳ ನೇಮಕ ಮಾಡುವ ಕುರಿತಂತೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. 362 ಹುದ್ದೆಗಳನ್ನು ನೇಮಕ ಮಾಡುವಂತೆ ಕೆಎಟಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಆ ಹುದ್ದೆಗಳನ್ನು ನೇಮಕ ಮಾಡುವ ಕುರಿತು ಚರ್ಚಿಸಲಾಯಿತು. ಆದರೆ, ಕೊನೆಯ ಗಳಿಗೆಯಲ್ಲಿ ವಿಷಯ ಮಂಡನೆ ಮಾಡಿರುವುದರಿಂದ ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಯಿತೆಂದು ಮೂಲಗಳು ತಿಳಿಸಿವೆ.

No Comments

Leave A Comment