Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ದೆಹಲಿ: ಸಿಲಿಂಡರ್ ಸ್ಫೋಟ- ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ಸಾವು, ನಾಲ್ವರಿಗೆ ಗಾಯ

ನವದೆಹಲಿ: ರಾಜಧಾನಿ ದೆಹಲಿಯ ವಿಕಾಸ್’ಪುರಿಯಲ್ಲಿ ಎಲ್’ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಅಗ್ನಿ ಶಾಮಕ ದಳ ಸಿಬ್ಬಂದಿ ಸಾವನ್ನಪ್ಪಿ ನಾಲ್ವರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದ ಪರಿಣಾಮ ಅಗ್ನಿಶಾಮಕದ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಅಂಗಡಿಯೊಳಗಿದ್ದ ಎಲ್’ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಗ್ನಿಶಾಮಕದ ದಳದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಇನ್ನೂ ನಾಲ್ವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment