Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಚೀನಾ ಲಕ್ಸುರಿ ಹೊಟೆಲ್ ನಲ್ಲಿ ಭೀಕರ ಅಗ್ನಿ ಅವಘಡ; 3 ಸಾವು, ಹಲವರು ಸಿಲುಕಿರುವ ಶಂಕೆ

ಬೀಜಿಂಗ್: ಚೀನಾದ ಲಕ್ಸುರಿ ಹೊಟೆಲ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ.

ಚೀನಾದ ನ್ಯಾನ್ ಚಂಗ್ ಜಿಲ್ಲೆಯ ಜಿಯಾಂಕ್ಸಿ ಪ್ರಾಂತ್ಯದಲ್ಲಿರುವ ಹೊಟೆಲ್ ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಈ ವರೆಗೂ ಮೂರು ಮಂದಿ ಸಾವನ್ನಪ್ಪಿದ್ದಾರೆ, ಅಲ್ಲದೆ 14ಕ್ಕೂ ಹೆಚ್ಚು ಮಂದಿ  ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂತೆಯೇ ಹೊಟೆಲ್ ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು  ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.

ಹೆಎಚ್ ಎನ್ ಪ್ಲಾಟಿನಂ ಮಿಕ್ಸ್ ಹೊಟೆಲ್ ನಲ್ಲಿ ಅವಘಡ ಸಂಭವಿಸಿದ್ದು, ಬೆಂಕಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪ್ರಸ್ತುತ ಬೆಂಕಿ ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಒಳಗೆ  ಸಿಲುಕಿರುವ ಮಂದಿಯ ರಕ್ಷಣೆಗಾಗಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ದುರಂತ ನಡೆದ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಹೊಟೆಲ್ ನ ನವೀಕರಣ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ,

No Comments

Leave A Comment