Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಬಂದ್‌: ದಕ್ಷಿಣ ಕನ್ನಡ ಉದ್ವಿಗ್ನ; ವಿದ್ಯಾರ್ಥಿಗಳ ಪರದಾಟ,ಹಲವರ ಬಂಧನ

ಮಂಗಳೂರು : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಶನಿವಾರ ಮಂಗಳೂರಿನಲ್ಲಿ ನಡೆಯಲಿರುವ ಕೋಮು ಸೌಹಾರ್ದ ರ್ಯಾಲಿಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರದ ಸಂಘಟನೆಗಳು ದ.ಕ. ಜಿಲ್ಲಾದ್ಯಂತ  ಇಂದು ಶನಿವಾರ ಹರತಾಳ ಆಚರಿಸಲು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ  ಸಾರ್ವಜನಿಕರು ಪರದಾಡಬೇಕಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತೆರಳಲಾಗದೆ ಪರದಾಡಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು ಜಿಲ್ಲೆಯಲ್ಲಿ ಉದ್ವಿಗ್ನ  ಸ್ಥಿತಿ ನಿರ್ಮಾಣವಾಗಿದೆ.

ಕಂಕನಾಡಿಯಲ್ಲಿ ಸರ್ಕಾರಿ ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದ್ದು, ಪಡೀಲ್‌ನಲ್ಲಿ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಾಕಲಾಗಿದೆ. ಈಗಾಗಲೆ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಖಾಸಗಿ ವಾಹನಗಳು ವಿರಳವಾಗಿ ಸಂಚರಿಸುತ್ತಿದ್ದು, ಕೆಲವೆಡೆ ಸರ್ಕಾರಿ ಬಸ್‌ ಮತ್ತು ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಿವೆ.

ಕೋಮು ಸೌಹಾರ್ದ ರ್ಯಾಲಿ ಮತ್ತು ಸಭೆ ಹೊರತುಪಡಿಸಿ ಉಳಿದಂತೆ ಹರತಾಳ, ಬಂದ್‌ ಆಚರಿಸದಂತೆ ನಗರದಲ್ಲಿ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತೆರಳಲು ಸಾಧ್ಯವಾಗದೆ ಪರದಾಡಬೇಕಾಗಿದ್ದು ಈ ಬಗ್ಗೆ  ಪೋಷಕರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

No Comments

Leave A Comment