Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಉಗ್ರರ ವಿರುದ್ಧ ಕಾರ್ಯಾಚರಣೆ: 4 ಉಗ್ರರ ಹತ್ಯೆ, 600 ಶಂಕಿತರ ಬಂಧಿಸಿದ ಪಾಕ್ ಸೇನೆ

ಇಸ್ಲಾಮಾಬಾದ್: ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ದಾಳಿ ನಡೆಸಿದ ಬಳಿದ ಉಗ್ರರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿರುವ ಪಾಕಿಸ್ತಾನ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದು, 600 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಪಾಕಿಸ್ತಾನ ಸೇನೆ ಹೇಳಿಕೆ ನೀಡಿದ್ದು, ಉಗ್ರರ ವಿರುದ್ಧ ರಾಡ್-ಉಲ್-ಫಸಾದ್ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದು, ಪ್ರಸ್ತುತ ನಾಲ್ಕು ಉಗ್ರರನ್ನು ಹತ್ಯೆ ಮಾಡಲಾಗಿದ್ದು 600 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿಕೊಂಡಿದೆ.

ಪ್ಯಾರಾಮಿಲಿಟರಿ ಯೋಧರು ನೂತನ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಯೋಧರೊಂದಿಗೆ ಇನ್ನಿತರೆ ಸಂಸ್ಥೆಗಳೂ ಕೂಡ ಕೈಜೋಡಿಸಿದೆ. ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ ತಾಲಿಬಾನ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಜಮತ್-ಉಲ್-ಅಹ್ರಾರ್ ಸಂಘಟನೆಯ ಕಾರ್ಯಕರ್ತರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಸಿಂಧ್ ಪ್ರಾಂತ್ಯದ ಸೆಹ್ವಾನ್ ನಲ್ಲಿರುವ ಲಾಲ್ ಶಹಭಾಝ್ ಖಲಂದರ್ ಹೆಸರಿನ ದರ್ಗಾದಲ್ಲಿ ಕೆಲ ದಿನಗಳ ಹಿಂದಷ್ಟೇ ಉಗ್ರರು ಅಟ್ಟಹಾಸ ಮೆರೆದಿದ್ದರು, ದರ್ಗಾದಲ್ಲಿ ಮೊದಲಿಗೆ ಗ್ರೆನೇಡ್ ದಾಳಿ ನಡೆಸಿದ್ದ ಉಗ್ರರು ನಂತರ ಅತ್ಮಾಹುತಿ ದಾಳಿ ನಡೆಸಿದ್ದರು. ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿಗೆ ಗಂಭೀರವಾದ ಗಾಯಗಳಾಗಿದ್ದವು. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.

ಈ ದಾಳಿಯ ಬಳಿಕ ಎಚ್ಚೆತ್ತ ಪಾಕಿಸ್ತಾನ ಸರ್ಕಾರ ಉಗ್ರರ ಸಂಘಟನೆಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ದಾಳಿಯಾದ ಕೇವಲ ಒಂದೇ ದಿನದ ಅಂತರದಲ್ಲಿ 39 ಕ್ಕೂ ಹೆಚ್ಚು ಶಂಕಿತ ಉಗ್ರರನ್ನು ಹತ್ಯೆ ಮಾಡಿತ್ತು. ಇದೀಗ ಮತ್ತೆ ನಾಲ್ಕು ಉಗ್ರರನ್ನು ಹತ್ಯೆ ಮಾಡಿದೆ.

No Comments

Leave A Comment