Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

‘ದೆಹಲಿ ವಿವಿ ರಕ್ಷಿಸಿ ಅಭಿಯಾನ’ದಿಂದ ಹಿಂದೆಸರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ

ನವದೆಹಲಿ: ದೆಹಲಿ ರಾಮ್ಜಾಸ್ ಕಾಲೇಜಿನಲ್ಲಿ ಘರ್ಷಣೆ ಪ್ರಕರಣ ಸಂಬಂಧಿಸಿದಂತೆ ಎಬಿವಿಪಿ ವಿರುದ್ಧ ತಿರುಗಿಬಿದ್ದು, ‘ದೆಹಲಿ ವಿಶ್ವವಿದ್ಯಾಲಯವನ್ನು ರಕ್ಷಿಸಿ’ ಹೊಸ ಅಭಿಯಾನವನ್ನು ಆರಂಭಿಸಿ ಸಾಕಷ್ಟು ಪರ ಹಾಗೂ ವಿರೋಧ ಟೀಕೆಗಳನ್ನು ಎದುರಿಸಿದ್ದ ಕಾರ್ಗೀಲ್ ಹುತಾತ್ಮ ಯೋಧನ ಪುತ್ರಿ ಗುರ್​ವೇಹರ್ ಕೌರ್ ಅವರು ಮಂಗಳವಾರ ತಮ್ಮ ಅಭಿಯಾನವನ್ನು ಕೈಬಿಟ್ಟಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾನು ನನ್ನ ಅಭಿಯಾನವನ್ನು ಕೈಬಿಡುತ್ತಿದ್ದೇನೆ. ಈ ಮೂಲಕ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆ. ಏಕಾಂಗಿಯಾಗಿರಲು ಬಯಸಿದ್ದೇನೆ. ಹೇಳಬೇಕಿದ್ದ ಮಾತುಗಳನ್ನು ನಾನು ಹೇಳಿದ್ದೇನೆ. ಅಭಿಯಾನದ ಮೂಲಕ ಸಾಕು ಎನಿಸುವಷ್ಟು ಅನುಭವಿಸಿದೆ. 20 ವಯಸ್ಸಿನಲ್ಲಿ ನಾನು ಇಷ್ಟನ್ನು ಮಾತ್ರ ಸಹಿಸಿಕೊಳ್ಳಬಲ್ಲೆ ಎಂದು ಹೇಳಿಕೊಂಡಿದ್ದಾರೆ.

ನನ್ನ ಧೈರ್ಯ ಹಾಗೂ ಶೌರ್ಯದ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ, ಅಂತಹವರಿಗೆ ನಾನು ಈಗಾಗಲೇ ಹೆಚ್ಚಿನ ರೀತಿಯಲ್ಲಿಯೇ ಉತ್ತರವನ್ನು ನೀಡಿದ್ದೇನೆ. ಇನ್ನು ಮುಂದೆ ಹಿಂಸಾಚಾರ ಹಾಗೂ ಬೆದರಿಕೆಗಳನ್ನು ಹಾಕುವವರು ಒಂದಲ್ಲ ಎರಡು ಬಾರಿ ಆಲೋಚನೆ ಮಾಡುತ್ತಾರೆಂಬುದನ್ನು ಮಾತ್ರ ಖಚಿತವಾಗಿ ಹೇಳುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ದೆಹಲಿಯ ಖಾಲ್ಸಾ ಕಾಲೇಜಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತೀಯೊಬ್ಬ ವಿದ್ಯಾರ್ಥಿ ಭಾಗಿಯಾಗುವಂತೆ ಕರೆ ನೀಡಿರುವ ಅವರು, ಅಭಿಯಾನ ನಡೆಯುತ್ತಿರುವುದು ವಿದ್ಯಾರ್ಥಿಗಳಿಗಾಗಿ, ನನಗಾಗಿ ಅಲ್ಲ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಎಂದಿದ್ದಾರೆ.

ಈ ಹಿಂದೆ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್​ವೇಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದರು,ಕೈ ಬರಹವುಳ್ಳ ಘೋಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್​ಮೆಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮರ್ಶಿಸುವ ಸ್ವಾತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಳು.

No Comments

Leave A Comment