Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ರದ್ಧುಗೊಳಿಸಲು ತೀರ್ಮಾನಿಸಿದೆ.

ಸುಮಾರು 1800 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಡಿಎ ನಿರ್ಮಿಸಲು ಉದ್ದೇಶಿಸಿತ್ತು. ಹೆಬ್ಬಾಳ-ಚಾಲುಕ್ಯ ವೃತ್ತ ನಡುವಿನ 6.7 ಕಿ.ಮೀ ಸ್ಟೀಲ್ ಬ್ರಿಡ್ಜ್ ನಿರ್ಮಾಣವನ್ನು ಹಲವು ಸಂಘಟನೆಗಳು ವಿರೋಧಿಸಿದ್ದವು. ಅಲ್ಲದೆ ಬೆಂಗಳೂರಿನ ಹಲವು ಕಡೆ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದ್ದವು.

ಇದೇ ವೇಳೆ ಸಿದ್ದರಾಮಯ್ಯ ಅವರು ಸ್ಟೀಲ್ ಬ್ರಿಡ್ಜ್ ಯೋಜನೆಗಾಗಿ 65 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದರು. ಈ ಪ್ರಕಣ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬೃಹತ್ ಯೋಜನೆಯನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

No Comments

Leave A Comment