Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಉಡುಪಿ: ತೆಂಕುತಿಟ್ಟು ಯಕ್ಷಗಾನ ತರಗತಿ ಆರಂಭ

ಉಡುಪಿ :ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಪ್ರತಿಷ್ಠಾನ ಮತ್ತು ಪಣಂಬೂರು ವೆಂಕಟರಾವ್ ಪ್ರತಿಷ್ಠಾನ ಸಂಯೋಜನೆಯಲ್ಲಿ ತೆಂಕುತಿಟ್ಟು ಯಕ್ಷಗಾನ ಕಲಿಕಾ ತರಬೇತಿ ಶ್ರೀ ಸೋದೆವಾದಿರಾಜ ಮಠದಲ್ಲಿ ಮಾರ್ಚ್ 1, 2017ರಂದು ಆರಂಭಗೊಂಡಿತು. ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ವ್ಯಕ್ತಿತ್ವ ರೂಪಿಸುವಲ್ಲಿ ಕಲೆ, ಸಾಹಿತ್ಯ ಅತ್ಯಂತ ಗಮನಾರ್ಹ ಪಾತ್ರವಹಿಸುತ್ತವೆ ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಅಭ್ಯಾಗತರಾಗಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಪ್ರೊ. ಎಂ. ಎಲ್ ಸಾಮಗ ಮತ್ತು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಭಾಗವಹಿಸಿದ್ದರು.

ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಶ್ರೀ ರಾಮಕೃಷ್ಣ ಮಯ್ಯ ಸ್ವಾಗತಿಸಿದರು. ಪಣಂಬೂರು ವೆಂಕಟರಾವ್ ಪ್ರತಿಷ್ಠಾನದ ಶ್ರೀಮತಿ ಗೋಪಿಕಾ ಮಯ್ಯ ಉಪಸ್ಥಿತರಿದ್ದರು.

ತರಗತಿ ಪ್ರತೀ ಬುಧವಾರ ಸಂಜೆ 5.30 ರಿಂದ ಆರಂಭವಾಗುತ್ತದೆ. ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ಎಂದು ತರಬೇತಿಯ ಗುರುಗಳಾದ ಅಡ್ಕ ರಾಕೇಶ್ ರೈ ತಿಳಿಸಿದರು.

ಗಿರಿರಾಜ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

No Comments

Leave A Comment