Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಡ್ವೈನ್ ಸ್ಮಿತ್ ವಿದಾಯ

ವೆಸ್ಟ್ ಇಂಡೀಸ್ ಆಟಗಾರ ಡ್ವೈನ್ ಸ್ಮಿತ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ.

ಸದ್ಯ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಪರ ಆಡುತ್ತಿರುವ 33 ವರ್ಷದ ಡ್ವೈನ್ ಸ್ಮಿತ್ ಎರಡನೇ ಅರ್ಹತಾ ಫೈನಲ್ ಪಂದ್ಯಕ್ಕೂ ಮುನ್ನ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

2003-04ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸ್ಮಿತ್ ಪಾದಾರ್ಪಣೆ ಮಾಡಿದ್ದರು. 10 ಟೆಸ್ಟ್ ಪಂದ್ಯಗಳನ್ನು ಆಡಿರುವ ಸ್ಮಿತ್ 320 ರನ್ ಸಿಡಿಸಿದ್ದಾರೆ. ಒಂದು ಶತಕ ಸಿಡಿಸಿದ್ದಾರೆ. ಇನ್ನು 87 ಏಕದಿನ ಪಂದ್ಯಗಳನ್ನು ಆಡಿರುವ ಸ್ಮಿತ್ 1102 ರನ್ ಗಳನ್ನು ಸಿಡಿಸಿದ್ದಾರೆ. ಇದರಲ್ಲಿ 7 ಅರ್ಧಶತಕ ಸೇರಿವೆ.

No Comments

Leave A Comment