Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಛತ್ತೀಸ್​ಗಢ: ನಕ್ಸಲರೊಂದಿಗೆ ಗುಂಡಿನ ಚಕಮಕಿ, ಇಬ್ಬರು ಯೋಧರು ಹುತಾತ್ಮ

ರಾಯ್ ಪುರ: ಛತ್ತೀಸ್​ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಢ ಶಶಸ್ತ್ರ ಪಡೆ ಹಾಗೂ ಜಿಲ್ಲಾ ಪೊಲೀಸರು ಇಂದು ಮಿರ್ತುರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರ್ಲಿ ಸಮೀಪ ರಸ್ತೆ ಕಾಮಗಾರಿಗೆ ಭದ್ರತೆ ಒದಗಿಸುತ್ತಿದ್ದ ವೇಳೆ ನಕ್ಸಲರು ತಂಡ ಇದ್ದಕ್ಕಿದಂತೆ ಗುಂಡಿನ ದಾಳಿ ನಡೆಸಿದೆ ಎಂದು ಬಸ್ತಾರ್ ರೇಂಜ್ ಐಜಿ ಸುಂದರರಾಜ್ ಪಿ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಿರ್ಮಾಣ ಹಂತದ ಗಂಗಲೂರ್-ಮಿರ್ತುರ್ ರಸ್ತೆಯಲ್ಲಿ ಭದ್ರತಾ ಗಸ್ತು ತಿರುಗುತ್ತಿದ್ದರು. ಈ ವೇಳೆ ನಕ್ಸಲರ ತಂಡ ಭಾರಿ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಪೇದೆಗಳಾದ ಹೇಮಂತ್ ಕುಮಾರ್ ಹಾಗೂ ಗುಬ್ಬ ರಾಮ್ ಅವರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಜವಾನರು ಗಾಯಗೊಂಡಿದ್ದಾರೆ ಎಂದು ಸುಂದರರಾಜ್ ಅವರು ಹೇಳಿದ್ದಾರೆ.

ಗಾಯಗೊಂಡ ಸಹದೇವ್ ರಾಜ್ವಾಡೆ ಹಾಗೂ ಮುದ್ದುರಾಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment