Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಅಸ್ಪ್ರಶ್ಯತೆ ಅತ್ಯಂತ ನೋವಿನ ಸಂಗತಿ-ಸಚಿವ ಪ್ರಮೋದ್

ಉಡುಪಿ: ಸಮಾನತೆಯನ್ನು ಸಾರಿರುವ ನಮ್ಮ ಸಂವಿಧಾನದ ಆಶಯವನ್ನು ಈಡೇರಿಸಲು ಸ್ವಾತಂತ್ರ್ಯ ದೊರೆತ 70 ವರ್ಷದ ಬಳಿಕವೂ ಅರಿವು ಮೂಡಿಸಬೇಕಾದುದು ದು:ಖಕರ ಎಂದು ಮೀನುಗಾರಿಕೆ, ಯುವಜನಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರಿಂದು ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಹಾಗೂ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮದಡಿ ಅಸ್ಪ್ರಶ್ಯತಾ ನಿವಾರಣಾ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾಮಾಜಿಕ ನ್ಯಾಯ ಇನ್ನೂ ಹಲವೆಡೆ ಹಲವರಿಗೆ ಪ್ರಶ್ನಾರ್ಹವಾಗಿರುವುದು ನಾವೆಲ್ಲರೂ ತಲೆತಗ್ಗಿಸಬೇಕಾದ ವಿಚಾರ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಾದ ಕೆಲವು

ಘಟನೆಗಳನ್ನು ಉದಾಹರಿಸಿದ ಅವರು ಅಸ್ಪ್ರಶ್ಯತೆ ಅತ್ಯಂತ ನೋವಿನ ಸಂಗತಿ ಎಂದರು.ಮಾನವ ಸಮಾಜ ತಲೆತಗ್ಗಿಸುವಂತಹ ಆಚರಣೆಗಳು ತಪ್ಪು; ಜನರಲ್ಲಿ ಈ ನಿಟ್ಟಿನಲ್ಲಿ ಬಹಳಷ್ಟು ಪರಿವರ್ತನೆಯಾಗಬೇಕಿದೆ ಎಂದ ಅವರು, ಡಾ ಬಿ ಆರ್ ಅಂಬೇಡ್ಕರ್, ಬಾಬು ಜಗಜೀವನರಾಮ್ ಇವರೆಲ್ಲರ ಬದುಕು ಯುವ ಜನಾಂಗಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ನಗರಸಭೆ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ತಾಲೂಕು ಪಂಚಾಯತ್ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ತಹಸೀಲ್ದಾರ್ ಮಹೇಶ್ಚಂದ್ರ ವೇದಿಕೆಯಲ್ಲಿದ್ದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಸ್ ಎನ್ ರಮೇಶ್ ಸ್ವಾಗತಿಸಿದರು. ದೌರ್ಜನ್ಯ ಪ್ರತಿಬಂಧ ಕಾಯಿದೆ ಹಾಗೂ ಅಸ್ಪಶ್ಯತಾ ನಿವಾರಣೆ ಕುರಿತು ಮಹಾಬಲ ವಕೀಲರು, ನಾಗರೀಕಹಕ್ಕು ಸಂರಕ್ಷಣಾ ಅಧಿನಿಯಮ ಕುರಿತು ವಿ ಮಂಜುನಾಥ ವಕೀಲರು ಉಪನ್ಯಾಸ ನೀಡಿದರು. ಕಲಾತಂಡದಿಂದ ಕಿರುನಾಟಕವೂ ಪ್ರದರ್ಶಿಸಲ್ಪಟ್ಟಿತು.

No Comments

Leave A Comment