Log In
BREAKING NEWS >
ಜುಲೈ.5ಕ್ಕೆ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ.....ಉಗ್ರರ ದಮನಕ್ಕೆ ಕಾಶ್ಮೀರ ಸಿದ್ಧ : ಕಾಶ್ಮೀರಕ್ಕೆ Snipers, NSG ರವಾನೆ

ಲೋಕಾ ಕಂಟಕ; ತನಿಖೆ ಎದುರಿಸಿ, ಸುಪ್ರೀಂನಲ್ಲೂ ನ್ಯಾ.ರಾವ್ ಅರ್ಜಿ ವಜಾ

ನವದೆಹಲಿ:ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಜಸ್ಟೀಸ್ ಭಾಸ್ಕರ ರಾವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿ, ವಿಚಾರಣೆ ಎದುರಿಸಲು ನಿರ್ದೇಶನ ನೀಡಿದೆ ಈ ಹಿನ್ನೆಲೆಯಲ್ಲಿ ಭಾಸ್ಕರ ರಾವ್ ಅವರಿಗೂ ಕಾನೂನು ಸಮರದಲ್ಲಿ ತೀವ್ರ ಹಿನ್ನಡೆಯಾದಂತಾಗಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿ ಭಾಸ್ಕರ ರಾವ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಂಡಿತ್ತು. ಏತನ್ಮಧ್ಯೆ ಜಾಮೀನು ಪಡೆದುಕೊಂಡಿದ್ದ ನ್ಯಾ.ಭಾಸ್ಕರ ರಾವ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ, ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದೆ.

No Comments

Leave A Comment