Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ವಿಷಾಹಾರ ಸೇವಿಸಿ ತುಮಕೂರಿನಲ್ಲಿ ಮೂವರು ವಿದ್ಯಾರ್ಥಿಗಳ ದಾರುಣ ಸಾವು!

ತುಮಕೂರು: ವಿಷಾಹಾರ ಸೇವನೆಯಿಂದಾಗಿ ವಸತಿ ಶಾಲೆಯೊಂದರ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಇಬ್ಬರು ಗಂಭೀರವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಚಿಕ್ಕನಾಯಕನ ಹಳ್ಳಿಯಲ್ಲಿವ ವಿದ್ಯಾವಾರಿದಿ ಇಂಟರ್ ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಐವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ  ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಪ್ರಥಮ ಚಿಕಿತ್ಸೆ ಬಳಿಕೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿತ್ತು.

ಈ ವೇಳೆ ಮಾರ್ಗ ಮಧ್ಯೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು  ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳನ್ನು ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂದು ಗುರುತಿಸಲಾಗಿದೆ.ಅಂತೆಯೇ ಸುದರ್ಶನ್ ಎಂಬ ಮತ್ತೋರ್ವ ವಿದ್ಯಾರ್ಥಿ ಹಾಗೂ ವಸತಿ ಶಾಲೆಯ ಗಾರ್ಡ್ ಕೂಡ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಈ ಖಾಸಗಿ ಶಾಲೆ ಮಾಜಿ ಶಾಸಕ ಕಿರಣ್  ಕುಮಾರ್ ಅವರಿಗೆ ಸೇರಿದ ಶಾಲೆಯಾಗಿದೆ ಎಂದು ತಿಳಿದುಬಂದಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ತುಮಕೂರು ಜಿಲ್ಲಾ ಡಿಎಚ್ ಒ ರಂಗಸ್ವಾಮಿ ಅವರು, ಮೇಲ್ನೋಟಕ್ಕೆ ವಿಷಾಹಾರ ಸೇವನೆಯಿಂದಾಗಿ ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.

ಹೀಗಾಗಿ ವಿದ್ಯಾರ್ಥಿಗಳು  ಸೇವಿಸಿದ ಆಹಾರದ ಮಾದರಿಗಳನ್ನು ಸಂಗ್ರಹಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಹಾಸ್ಟೆಲ್ ನ ಇತರೆ ವಿದ್ಯಾರ್ಥಿಗಳು ಊಟ ಸೇವಿಸದ ಕಾರಣ ಅವರಿಗೆ ಯಾವುದೇ ತೊಂದರೆಯಾಗಿಲ್ಲ.

ಮೊದಲು ಈ ಐವರು ಊಟ ಸೇವಿಸಿ  ಅಸ್ವಸ್ಥರಾಗಿದ್ದರು. ಹೀಗಾಗಿ ಹಾಸ್ಟೆಲ್ ಉಳಿದ ವಿದ್ಯಾರ್ಥಿಗಳು ಊಟ ಸೇವಿಸಿರಲಿಲ್ಲ ಎಂದು ಹೇಳಿದ್ದಾರೆ.ಪ್ರಸ್ತುತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment