Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ; ಏಪ್ರಿಲ್ 9ರಂದು ಮತದಾನ

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ್ದು, ಇದೇ ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ತಿಳಿದುಬಂದಿದೆ.

ಇದೇ ಏಪ್ರಿಲ್ 9ರಂದು ಮತದಾನ ಆರಂಭವಾಗಲಿದ್ದು, ಏಪ್ರಿಲ್ 13ರಂದು ಮತಎಣಿಕೆ ನಡೆಯಲಿದೆ. ಇನ್ನು ಮಾರ್ಚ್ 14ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, ಮಾರ್ಚ್ 21 ನಾಮಪತ್ರ ಸಲ್ಲಿಸಲು ಅಂತಿಮ  ದಿನವಾಗಿದೆ. ಮಾರ್ಚ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮಾರ್ಚ್ 24 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಂಜನಗೂಡು ಮತ್ತು ಗುಂಡ್ಲುಪೇಟೆ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಈ ಹಿಂದೆ ಗುಂಡ್ಲು ಪೇಟೆ ಶಾಸಕ ಹಾಗೂ ಸಕ್ಕರೆ ಮತ್ತು ಸಹಕಾರಿ ಸಚಿವರಾಗಿದ್ದ ಎಚ್ ಎಸ್ ಮಹದೇವ ಪ್ರಸಾದ್ ಅವರು ಕಳೆದ  ಜನವರಿಯಲ್ಲಿ ಕೊಪ್ಪದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು.

ಅಂತೆಯೇ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತ ಮತ್ತು ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಶ್ರೀನಿವಾಸ್  ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ಈ ಎರಡೂ ಕ್ಷೇತ್ರಗಳಿಗೆ ಇದೀಗ ಉಪ ಚುನಾವಣೆ ನಡೆಯುತ್ತಿದೆ.

ಪ್ರಸ್ತುತ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಅವರೇ ಬಿಜೆಪಿ ಪರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ  ಖಚಿತವಾಗಿದೆ. ಆದರೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದರ ಕುರಿತು ಕಾಂಗ್ರೆಸ್ ಪಕ್ಷವ ಈ ವರೆಗೂ ಮಾಹಿತಿ ನೀಡಿಲ್ಲ.

No Comments

Leave A Comment