Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ…

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು.

ಈ ಸಭೆಯ ಅಧ್ಯಕ್ಷರಾಗಿ ಹೂಡೆಯ ಅರೇಬಿಕ್ ವುಮೆನ್ಸ್ ಕಾಲೇಜಿನ ಪ್ರಿನ್ಸಿಪಾಲ್ ಶ್ರೀಮತಿ ಖುಲ್ಸಮ್ ಅಬೂಬಕ್ಕರ್,ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್,ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ಶ್ರೀಮತಿ ಶಿಲ್ಪನಾಗ್ ಭಾಗವಹಿಸಿದ್ದರು. ಹಾಗೂ ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ (ರಿ) ಉಡುಪಿ ಇದರ ಅಧ್ಯಕ್ಷರಾದ ಶೀಲಾ.ಕೆ.ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಯಶೋಧ.ಜೆ.ಶೆಟ್ಟಿ,ಉಪಾಧ್ಯಕ್ಷರಾದ ಸುಷ್ಮಾ.ಎಸ್.ಶೆಟ್ಟಿ, ಸುಪ್ರಭಾ ಆಚಾರ್ಯ, ಜತೆ ಕಾರ್ಯದರ್ಶಿ ಗೀತಾರವಿ, ಕೋಶಾಧಿಕಾರಿ ಮಮತಾ ಎಸ್.ಶೆಟ್ಟಿ, ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ವಸಂತಿ ರಾವ್ ಕೊರಾಡ್ಕಲ್,ಕುಂದಾಪುರ ತಾಲೂಕು ಒಕ್ಕೂಟದ ಅಧ್ಯಕ್ಷರಾದ ರಾಧದಾಸ್,ಸರಳ ಕಾಂಚನ್ ಸಭೆಯಲ್ಲಿ ಉಪಸ್ಥಿತರಿದ್ದು  ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಸಹಾಯಕ ಆಯುಕ್ತರಾದ ಶ್ರೀಮತಿ ಶಿಲ್ಪನಾಗ್, ಅರೇಬಿಕ್ ವುಮೆನ್ಸ್ ಕಾಲೇಜಿನ ಪ್ರಿನ್ಸಿಪಾಲ್ ಶ್ರೀಮತಿ ಖುಲ್ಸಮ್ ಅಬೂಬಕ್ಕರ್ ಹಾಗೂ ಸರಳ ಕಾಂಚನ್ ಹಾಗೂ ಉತ್ತಮ ಸಂಘಟನೆಯ ಪರವಾಗಿ ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿ ಇವರಿಗೆ ಸನ್ಮಾನ ಮಾಡಲಾಯಿತು.

ವಿವಿಧ ಮಹಿಳಾ ಮಂಡಳಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

No Comments

Leave A Comment