Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ, 11 ಸಾವು

ಪುಣೆ: ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಶನಿವಾರ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 11 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೋರೆಗಾಂವ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯಾತ್ರಾರ್ಥಿಗಳು ಬಸ್ ನಲ್ಲಿ ಸೋಲಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ 10 ಮಂದಿ ಯತ್ರಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಮುಂಬೈ ಹೊರವಲಯದ ಮುಳುಂದ್ ನಿವಾಸಿಗಳಾಗಿದ್ದು, ವಿಜಯ್ ಕಾಳೆ, ಜ್ಯೋತಿ ಕಾಳೆ, ಯೋಗೇಶ್ ಲೋಖಾಂಡೆ, ಜಯವಂತ್ ಚವಾಣ್, ಯೋಗಿತಾ ಚವಾಣ್, ರೇವತಿ ಚವಾಣ್, ಜಗದೀಶ್ ಪಂಡಿತ್ ಹಾಗೂ ಶೈಲಜಾ ಪಂಡಿತ್ ಎಂದು ಗುರುತಿಸಲಾಗಿದೆ.

No Comments

Leave A Comment