Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಯತ್ತ ಬಿಜೆಪಿ!

ಲಖನೌ: ಸತತ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರದ ಗದ್ದುಗೆ ಏರುತ್ತಿದ್ದು, ಆಡಳಿತ ವಿರೋಧಿ ಅಲೆಯನ್ನು ಬಿಜೆಪಿ ಪರಿಣಾಮಕಾರಿಯಾಗಿ ಬಳಿಸಿಕೊಂಡು ಅಭೂತಪೂರ್ವ ಯಶಸ್ಸು ಸಾಧಿಸಿದೆ.

ಒಟ್ಟು 404 ಕ್ಷೇತ್ರಗಳ ಪೈಕಿ ಬಿಜೆಪಿ ಬರೊಬ್ಬರಿ 305 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಸ್‏ಪಿ-ಕಾಂಗ್ರೆಸ್ ಮೈತ್ರೀಕೂಟ 69 ಮತ್ತು ಬಿಎಸ್ ಪಿ19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆ ಮೂಲಕ ಬಿಜೆಪಿ ಉತ್ತರ ಪ್ರದೇಶದಲ್ಲಿ  ಸರ್ಕಾರ ರಚನೆ ಮಾಡುವುದು ಸ್ಪಷ್ಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಗೂ ಉತ್ತರ ಪ್ರದೇಶ ಬಿಜೆಪಿ ನಾಯಕರ ಸಾಮೂಹಿಕ ನಾಯಕತ್ವಕ್ಕೆ ಜಯ ಸಂದಂತಾಗಿದೆ.

 ಆ ಮೂಲಕ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದು, ಈ ಹಿಂದೆ 1996ರಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಏರಿತ್ತು.ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ಕ್ರಮವನ್ನು ಟೀಕಿಸುತ್ತಿದ್ದ ಪ್ರತಿಪಕ್ಷಗಳ ದಾಳಿಗೂ ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಉತ್ತರ ನೀಡಿದ್ದು, ಕಾಂಗ್ರೆಸ್ ಭದ್ರಕೋಟೆಯಾಗಿದ್ದ ರಾಯ್ ಬರೇಲಿ ಮತ್ತು  ಅಮೇಠಿಯಲ್ಲೇ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.

ಇನ್ನು ಈ ಬಾರಿ ಶತಾಯಗತಾಯ ಅಧಿಕಾರದ ಗದ್ದುಗೆ ಏರಲೇಬೇಕು ಎನ್ನುವ ಯೋಜನೆ ರೂಪಿಸಿದ್ದ ಎಸ್ ಪಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಮಹಾಮೈತ್ರಿಗೂ ಸೆಡ್ಡು ಹೊಡೆದು ಬಿಜೆಪಿ ಭಾರಿ ಮುನ್ನಡೆ  ಸಾಧಿಸಿದೆ.

ಅನಿವಾರ್ಯವಾದರೆ ಬಿಎಸ್ ಪಿಯೊಂದಿಗೂ ಮೈತ್ರಿ ಮಾಡಿಕೊಳ್ಳುವುದಾಗಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದರಾದರೂ, ಎಸ್ ಪಿ, ಕಾಂಗ್ರೆಸ್ ಮತ್ತು ಬಿಎಸ್ ಪಿ ಪಕ್ಷಗಳ ಸ್ಥಾನವನ್ನು ಒಟ್ಟು ಕೂಡಿದರೂ ಮ್ಯಾಜಿಕ್  ಸಂಖ್ಯೆ ಬರುವುದಿಲ್ಲ. ಇತ್ತೀಚಿನ ವರದಿಗಳಂತೆ ಎಸ್ ಪಿ ಕಾಂಗ್ರೆಸ್ ಮೈತ್ರಿಕೂಟ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಎಸ್ ಪಿ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮೂರು ಪಕ್ಷಗಳು ಒಟ್ಟು 88 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ  ಸಾಧಿಸಿದ್ದು, ಮ್ಯಾಜಿಕ್ ಸಂಖ್ಯೆ 202ರ ಸಮೀಪಕ್ಕೂ ಬರಲು ಸಾಧ್ಯವಿಲ್ಲದಂತಾಗಿದೆ.

No Comments

Leave A Comment