Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ವಿಜಯಪುರ: ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.

ಸೊಲ್ಲಾಪುರದರಿಂದ ಹುಬ್ಬಳ್ಳಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ರೈಲು ದುರಂತವೊಂದು ತಪ್ಪಿದ್ದು, ರೈಲು ಹಳಿ ಬಿರುಕು ಸರಿಪಡಿಸಿದ ಬಳಿಕ ರೈಲು ಪ್ರಯಾಣ ಮುಂದುವರೆಸಿದೆ.  ವಿಜಯಪುರದ ಅಲಿಯಾಬಾದ್ ಬಳಿ ಹಳಿಯಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ಆಗಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದ್ದಾನೆ. ಅಲ್ಲದೆ ಕೂಡಲೇ ರೈಲ್ವೇ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ  ರೈಲು ಹಳಿ ಸರಿಪಡಿಸುವಂತೆ ಮಾಹಿತಿ ನೀಡಿದ್ದಾನೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆ ಸಿಬ್ಬಂದಿ ಹಳಿಯನ್ನು ದುರಸ್ಥಿಗೊಳಿಸಿ ರೈಲು ಚಲಿಸಲು ಅನುವು ಮಾಡಿಕೊಟ್ಟರು. ಈ ಘಟನೆಯಿಂದಾ ಈ ಮಾರ್ಗದಲ್ಲಿ 45 ನಿಮಿಷ ತಡವಾಗಿ ರೈಲು ಪ್ರಯಾಣ  ಮುಂದುವರೆಯಿತು.

ಹಳಿ ದುರಸ್ಥಿ ಕಾರ್ಯ ಪೂರ್ಣ ಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ಸುಗಮವಾಗಿ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ರೈಲ್ವೆ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶ್ಲಾಘನೆ ವ್ಯಕ್ತವಾಗುತ್ತಿದೆ.

No Comments

Leave A Comment